ಪ್ರತಿಭಾ ಪುರಸ್ಕಾರ

ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಮುಂದೆ ಉತ್ತಮ ಪ್ರಜೆಗಳಾಗಬಹುದು ಎಂದು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಬಾಲಕಿಯರ ವಿಭಾಗದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್‌ನ ಟ್ರಸ್ಟೀ ಬಿ.ಎನ್. ನರಸಿಂಹಮೂರ್ತಿಯವರು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್‌ರವರು ವಹಿಸಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರ ಸಮನ್ವಯಾಧಿಕಾರಿ ಕಮಲಾಕ್ಷರವರು ಅತಿಥಿಯಾಗಿ ಭಾಗವಹಿಸಿ ಶಾಲಾ ಚಟುವಟಿಕೆಗಳ ಬಗ್ಗೆ ಸಂತಸ […]