SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರದ ಉದ್ಘಾಟನೆ


 
ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜಿನ ಪ್ರಾರ್ಥನಾ ಮಂದಿರದಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಾಗಾರವನ್ನು ದಿ.27-09-2019ರಂದು ಉದ್ಘಾಟನೆಗೊಂಡಿತು. ವಿದ್ಯಾರ್ಥಿ ಸಮುದಾಯವನ್ನು ಸಮಾಜಮುಖಿಯನ್ನಾಗಿಸಬೇಕು ಎಂಬ ಉದ್ದೇಶದಿಂದ 1969ರಂದು ಗಾಂಧೀಜಿಯ ಜನ್ಮ ಶತಾಬ್ಧಿಯಂದು ಎನ್.ಎಸ್.ಎಸ್.ನ್ನು ದೇಶದಲ್ಲಿ ಆರಂಭಿಸಲಾಯಿತು. ನನಗಲ್ಲ ನಿನಗೆ ಎಂಬ ಘೋಷ ವಾಕ್ಯದೊಂದಿಗೆ ಸ್ವಾರ್ಥ ರಹಿತ ಸಮಾಜ ನಿರ್ಮಾಣವೇ ಇದರ ಗುರಿ. ಸಮಾಜದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಶಿಬಿರಾರ್ಥಿಯು ತನ್ನನ್ನು ತೊಡಗಿಸಿಕೊಳ್ಳಲು ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇದು ಸಹಕಾರಿ ಎಂದು ಅಳಿಕೆ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಎಸ್. ಉದ್ಘಾಟನಾ ಭಾಷಣದಲ್ಲಿ ಹೇಳಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಕೆ.ಎಸ್. ಕೃಷ್ಣ ಭಟ್ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಯಸ್., ಕಾಲೇಜಿನ ಪ್ರಾಂಶುಪಾಲರಾದ ಡಾ| ಎಂ. ಸಿದ್ದರಾಜು ಉಪಸ್ಥಿತರಿದ್ದರು. ಯೋಜನಾಧಿಕಾರಿ ವೆಂಕಟಕೃಷ್ಣ ಶರ್ಮ ಸ್ವಾಗತಿಸಿ, ಉಪನ್ಯಾಸಕರಾದ ಧನಂಜಯ ಪಿ. ವಂದಿಸಿದರು. ವಿದ್ಯಾರ್ಥಿ ಅನಿರುಧ್ ಭಟ್ ನಿರೂಪಿಸಿದರು. ವಿದ್ಯಾರ್ಥಿ ದೀಪಕ್ ಹಾಡನ್ನು ಹಾಡಿದರು. ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡರು.