SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಮಕ್ಕಳ ಸುರಕ್ಷತಾ ಸಪ್ತಾಹ

ತಾ. 5-12-2014ನೇ ಶುಕ್ರವಾರ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು.

ಆರಂಭದಲ್ಲಿ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಜನಪ್ರತಿನಿಧಿಗಳು, ಪೋಷಕರು, ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷರನ್ನೊಳಗೊಂಡ ಬೃಹತ್ ಜಾಥಾ ನಡೆಯಿತು.

ಅಳಿಕೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶೋಭಾ ಮೌನೇಶ್ ಆಚಾರ್ಯ ಮಕ್ಕಳ ಸುರಕ್ಷತಾ ಸಪ್ತಾಹದ ಪ್ರತಿಜ್ಞಾ ವಿಧಿ ಬೋಧಿಸಿ ಮಕ್ಕಳ ಸುರಕ್ಷತೆಯ ಬಗ್ಗೆ ಮಹತ್ವ ತಿಳಿಸಿಕೊಟ್ಟರು. ಮುಖ್ಯ ಅತಿಥಿ ನಿವೃತ್ತ ಮುಖ್ಯ ಶಿಕ್ಷಕ ರುಕ್ಮಯ ಗೌಡ ಸಪ್ತಾಹದ ಮಹತ್ವ ತಿಳಿಸಿಕೊಟ್ಟರು. ಸಭೆಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ಸದಸ್ಯರಾದ ಸದಾಶಿವ ಶೆಟ್ಟಿ ಮಡಿಯಾಲ, ಉಮಾವತಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಈಶ್ವರ ನಾಯ್ಕ್ ಸ್ವಾಗತಿಸಿ ಸಹ ಶಿಕ್ಷಕರಾದ ಬಿ. ಸತ್ಯನಾರಾಯಣ ಭಟ್ ವಂದಿಸಿ ರಾಜೇಂದ್ರ ರೈ, ಗೋಪಾಲಕೃಷ್ಣ ಭಟ್ ಸಹಕರಿಸಿದರು

Makkala Surakshata Sapthaha