Sri Sathya Sai Loka Seva Trust, Alike > News & Events > ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ

ಪದವಿ ಪೂರ್ವ ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ೨೦೧೪-೧೫ ಅಳಿಕೆಯ ಶ್ರೀ ಸತ್ಯಸಾಯಿ ಕ್ರೀಡಾಂಗಣದಲ್ಲಿ ದಿನಾಂಕ ೦೫-೧೧-೨೦೧೪ರಂದು ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯು. ಗಂಗಾಧರ ಭಟ್ ವಿದ್ಯಾರ್ಥಿ ನಿಜವಾದ ಕ್ರೀಡಾಸ್ಪೂರ್ತಿ ಹಾಗೂ ಕ್ರೀಡಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಿ ದೇಶಕ್ಕೆ ಹೆಸರು ತರಬೇಕು ಎಂದು ಹರಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಯಂ. ಈಶ್ವರ ಭಟ್ ಮಕ್ಕಳು ಸೋಲು ಗೆಲುವುಗಳನ್ನು ಸಮಾನ ಮನೋಭಾವನೆಯಿಂದ ಸ್ವೀಕಾರ ಮಾಡಿ, ಜೀವನದಲ್ಲಿ ಬರುವ ಸಿಹಿಕಹಿಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ರೂಢಿಸಬೇಕೆಂದು ಹೇಳಿ ಆಶೀರ್ವದಿಸಿದರು.

ಧ್ವಜಾರೋಹಣ ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಂಶುಪಾಲರಾದ ಕೆ.ಎಸ್. ಕೃಷ್ಣ ಭಟ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಗುರುನಾಥ ಬಾಗೇವಾಡಿಯವರು ಯಾವ ಸಂದಿಗ್ದ ಪರಿಸ್ಥಿತಿಯಲ್ಲಿಯೂ ಕ್ರೀಡಾ ನಿಮಯಗಳನ್ನು ಮರೆಯಬಾರದು. ಮಕ್ಕಳ ಮನೋ ಮಟ್ಟ ಹಾಗೂ ದೈಹಿಕ ಸುದೃಢತೆಗೆ ಕ್ರೀಡೆ ಬಹಳ ಪ್ರಾಮುಖ್ಯ ಎಂದು ಹೇಳಿ ಹರಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ವಿ. ದೈವಜ್ಞ ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲರಾದ ಕೆ. ಸಂಜೀವ ಶೆಟ್ಟಿ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಅಡ್ಯಂತಾಯ ಅಳಿಕೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕ ವರ್ಗದವರು, ಮಕ್ಕಳು ಉಪಸ್ಥಿತರಿದ್ದರು. ಅಳಿಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಸ್. ಚಂದ್ರಶೇಖರ ಭಟ್ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಯಾದವ ಎನ್. ಕಾರ್ಯಕ್ರಮ ನಿರ್ವಹಿಸಿದರು.

Sabha Karyakrama speech by Gurunath Bagewadi