73ನೇ ಸ್ವಾತಂತ್ರ್ಯ ದಿನಾಚರಣೆ
ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆ, ಅಳಿಕೆಯಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸೈನಿಕರಾದ ಶೇಷಪ್ಪ ಗೌಡ ಹಡೀಲು ಧ್ವಜಾರೋಹಣ ನೆರವೇರಿಸುವುದರೊಂದಿಗೆ ದೇಶಪ್ರೇಮ, ದೇಶ ಭಕ್ತಿ ಈ ಒಂದು ದಿನಕ್ಕೆ ಸೀಮಿತವಾಗಿರದೆ ಸದಾ ಜಾಗೃತಗೊಳ್ಳುತ್ತಿರಬೇಕು ಎಂದು ಸಭೆಯನ್ನುದ್ದೇಶಿಸಿ ಮಾತನಾಡಿ ಕಾರ್ಗಿಲ್ ಯುದ್ದದ ತನ್ನ ಅನುಭವವನ್ನು ಹಂಚಿಕೊಂಡರು.
ಸತ್ಯ, ಧರ್ಮ, ಶಾಂತಿ, ಪ್ರೇಮ, ದೇಶ ಭಕ್ತಿಯನ್ನು ಮೈಗೂಡಿಸಿಕೊಂಡು ಐಕ್ಯತೆಯಿಂದ ಬಾಳುವಂತೆ ಸಭಾಧ್ಯಕ್ಷತೆ ವಹಿಸಿದ್ದ ಅಳಿಕೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿರುವ ಎಸ್. ಜನಾರ್ದನ ನಾಯಕ್ ಅವರು ನುಡಿದರು. ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ವಾತಂತ್ರ್ಯದ ಮಹತ್ವದ ಬಗ್ಗೆ ಅನಿಸಿಕೆಯನ್ನು ಭಾಷಣ ಹಾಗೂ ಹಾಡುಗಳ ಮೂಲಕ ವ್ಯಕ್ತಪಡಿಸಿದರು. ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಸ್ ಪದ್ಮನಾಭ ಪೂಜಾರಿ, ಸದಸ್ಯರಾದ ಸದಾಶಿವ ಶೆಟ್ಟಿ ಮಡಿಯಾಲ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿ ವೃಂದ, ಶಿಕ್ಷಕ ವೃಂದ, ಪೆÇೀಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಈಶ್ವರ ನಾಯ್ಕ ಸ್ವಾಗತಿಸಿ, ಸಹ ಶಿಕ್ಷಕರಾದ ವೇಣುಗೋಪಾಲ ಶೆಟ್ಟಿ ವಂದಿಸಿದರು. ಶಿಕ್ಷಕರಾದ ಪ್ರವೀಣ ಶೆಟ್ಟಿ ಎಂ. ನಿರೂಪಿಸಿದರು.