ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು, ಮಹಾನಗರ ಪಾಲಿಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿಶ್ವವಿದ್ಯಾನಿಲಯ, ವಿಜಯ ಕರ್ನಾಟಕ ದಿನಪತ್ರಿಕೆ ಹಾಗೂ ಅರಣ್ಯ ಇಲಾಖೆ ಮಂಗಳೂರು ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ‘ವೃಕ್ಷೋತ್ಸವ-2019’ ಎಂಬ ಅರಣ್ಯ, ವನ್ಯಜೀವಿ ಹಾಗೂ ಪರಿಸರ ಆಚರಣೆ ವಿಶಿಷ್ಟ ಕಾರ್ಯಕ್ರಮದ ಪ್ರಯುಕ್ತ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಕೇಂದ್ರ, ಅಳಿಕೆಯ ಮಿಥಿಲ್ ಚೌಧುರಿ ಕೆ. ಹಾಗೂ ಶ್ರೀಶ ದ್ವಿತೀಯ ಸ್ಥಾನ ಪಡೆದಿರುತ್ತಾರೆ.