SRI SATHYA SAI LOKA SEVA TRUST, ALIKE

Alike Educational Institutions

+91 8255 239 236 , 238 736

ನಿರಂತರ ಅಧ್ಯಯನವೇ ಆದರ್ಶ ಶಿಕ್ಷಕನ ಜೀವನ: ಡಾ. ಹೆಚ್. ಎಸ್. ನಾಗರಾಜ್

ಶ್ರೀ ಸತ್ಯ ಸಾಯಿ ಲೋಕ ಸೇವಾ ವಿದ್ಯಾಸಂಸ್ಥೆಗಳು ಅಳಿಕೆ ಇಲ್ಲಿನ ಪ್ರಾರ್ಥನಾ ಮಂದಿರದಲ್ಲಿ ಕಾಲೇಜು ಹಾಗೂ ಪ್ರೌಢಶಾಲೆಯ ವಿಜ್ಞಾನ ಮತ್ತು ಗಣಿತ ವಿಭಾಗದ ಶಿಕ್ಷಕರಿಗೆ ಒಂದು ದಿನದ ಕಲಿಕಾ ಪುನಶ್ಚೇತನ ಕಾರ್ಯಾಗಾರ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಸ್ ಕೃಷ್ಣ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಳಿಕೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ರುದ್ರಮುನಿ ಕಾರ್ಯಕ್ರಮ ಸಂಘಟಿಸಿ ಅದರ ಉದ್ದೇಶವನ್ನು ವಿವರಿಸಿದರು. ಕಾರ್ಯದರ್ಶಿ ಎಸ್ ಚಂದ್ರಶೇಖರ ಭಟ್, ವಿಜ್ಞಾನದೊಂದಿಗೆ ಪ್ರಾಚೀನ ಸಂಸ್ಕೃತಿ ಅಳವಡಿಸಿಕೊಂಡು ಶಿಕ್ಷಣ ನೀಡಿದಾಗ ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ ಎಂದರು. ಬೆಂಗಳೂರಿನ ಪ್ರತಷ್ಠಿತ ಪ್ರಯೋಗ ಶಿಕ್ಷಣ ಹಾಗೂ ಸಂಶೋಧನೆ ಸಂಸ್ಥೆಯ ಸ್ಥಾಪಕರು ಮತ್ತು ಮಾರ್ಗದರ್ಶಕರಾದ ಡಾ. ಹೆಚ್.ಎಸ್. ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅಳಿಕೆ ವಿದ್ಯಾ ಸಂಸ್ಥೆಯ ಎಲ್ಲಾ ವಿಭಾಗಗಳ ವಿಜ್ಞಾನ ಹಾಗೂ ಗಣಿತ ಶಿಕ್ಷಕರ ಜೊತೆಗೆ, ದಾರವಾಡ, ಮೈಸೂರು, ಚೊಕ್ಕಾಡಿ ಹಾಗೂ ಬಾಯಾರು ವಿದ್ಯಾಸಂಸ್ಥೆಗಳ ವಿಜ್ಞಾನ ಮತ್ತು ಗಣಿತ ಶಿಕ್ಷಕರು ಬೆಳಿಗ್ಗೆ 10 ರಿಂದ ಸಂಜೆ 5.30 ತನಕ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಸಂಪನ್ಮೂಲ ವ್ಯಕ್ತಿ ಇಂದಿನ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಮೂಡಿಸುವುದಕ್ಕಾಗಿ ಅಧ್ಯಾಪಕರು ಜ್ಞಾನಾರ್ಜನೆಯ ನಿರಂತರತೆಯನ್ನು ಕಾಪಾಡಿಕೊಳ್ಳಬೇಕೆಂದು ಹೇಳಿದರು. ಆಡಳಿತಾಧಿಕಾರಿ ಜನಾರ್ದನ ನಾಯಕ್, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾಕೇಂದ್ರದ ಉಪ ಪ್ರಾಂಶುಪಾಲ ರಾಧಾಕೃಷ್ಣ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.