SRI SATHYA SAI LOKA SEVA TRUST, ALIKE

Alike Educational Institutions

+91 8255 239 236 , 238 736

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ

 ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ ಯು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ ಎಂ ಜಿ ಕಾರ್ಯಕ್ರಮ ವನ್ನು ಜ್ಯೋತಿ ಬೆ ಳಗಿಸುವ ಮೂಲಕ ಉದ್ಘಾಟಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಜ್ಞಾನದ ಮಾದ ರಿಗಳು ಅಗತ್ಯ ಎಂಬುದಾಗಿ ಹೇಳಿದರು. 25 ಶಾಲೆಗಳಿಂದ ಸುಮಾರು 65 ಮಕ್ಕಳು ಭಾಗವಹಿಸಿದ್ದರು. ವೈಯಕ್ತಿಕ ಮತ್ತು ಗುಂಪು ವಿಭಾಗದಿಂದ ಸಂಶೋದಿತ 42 ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸತ್ಯಸಾಯಿ  ಲೋಕಸೇವಾ ವಿದ್ಯಾಸಂಸ್ಥೆಗಳ ಸಂಚಾಲಕರು ಮತ್ತು‌ ಶ್ರೀ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್ ನ ಕಾರ್ಯ ದರ್ಶಿಗಳಾದ ಎಸ್ ಚಂದ್ರಶೇಖರ ಭಟ್ ವಹಿಸಿಕೊಂಡಿದ್ದು ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ವಿಜ್ಞಾನದ ಬಗ್ಗೆ ಆಸಕ್ತಿ ವಹಿಸಿ ಸಂಶೋದಿಸುವುದು ಅಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ರಾಘವೇಂದ್ರ ಬಲ್ಲಾಳ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ರಘು ಗೌರವನಿತರನ್ನು ಸ್ವಾಗತಿಸಿದರು. ಕಾರ್ಯಕ್ರಮದ ವಂದನೆಯನ್ನು ಶಿಕ್ಷಕರಾದ‌‌ ಶ್ರೀ ನಾರಾಯಣ ನಾಯಕ್ ಹಾಗೂ ನಿರೂಪಣೆಯನ್ನು ಶ್ರೀ ಅಶೊಕ ಕುಮಾರ ಇವರು ನಿರ್ವಹಿಸಿದರು.