SRI SATHYA SAI LOKA SEVA TRUST, ALIKE

Alike Educational Institutions

+91 8255 239 236 , 238 736

ಪ್ರತಿಭಾ ಪುರಸ್ಕಾರ

Prize Dist Photoಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರು ಮುಂದೆ ಉತ್ತಮ ಪ್ರಜೆಗಳಾಗಬಹುದು ಎಂದು ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಬಾಲಕಿಯರ ವಿಭಾಗದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್‌ನ ಟ್ರಸ್ಟೀ ಬಿ.ಎನ್. ನರಸಿಂಹಮೂರ್ತಿಯವರು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್‌ರವರು ವಹಿಸಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರ ಸಮನ್ವಯಾಧಿಕಾರಿ ಕಮಲಾಕ್ಷರವರು ಅತಿಥಿಯಾಗಿ ಭಾಗವಹಿಸಿ ಶಾಲಾ ಚಟುವಟಿಕೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೆ.ಟಿ. ಶೈಲಜಾ ಭಟ್, ವಿಟ್ಲ ವಲಯ ಶಿಕ್ಷಣ ಸಂಯೋಜಕರಾದ ದೇವದಾಸ್ ಮತ್ತು ವಿದ್ಯಾಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕೆ. ಸಂಜೀವ ಶಟ್ಟಿಯವರು ಬಹುಮಾನ ವಿತರಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಯಶೋಧರ ಬಂಗೇರಾರವರು ಪ್ರಾಸ್ತಾವಿಕವಾಗಿ ಶಾಲಾ ಚಟುವಟಿಕೆಗಳ ಮಾಹಿತಿ ನೀಡಿದರು. ಎಲ್ಲಾ ತರಗತಿಯ ಶಿಕ್ಷಕ, ಶಿಕ್ಷಕಿಯವರು ಬಹುಮಾನ ವಿಜೇತರ ವಿವರ ಮಂಡಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ರಘು ಟಿವೈ ಯವರು ಸ್ವಾಗತಿಸಿ ಸಹ ಶಿಕ್ಷಕ ಗೋಪಾಲಕೃಷ್ಣ ಭಟ್ ವಂದಿಸಿದರು. ಶಿಕ್ಷಕ ಈಶ್ವರ ನಾಯ್ಕರವರು ಕಾರ್ಯಕ್ರಮ ನಿರ್ವಹಿಸಿದರು.