SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಮತ್ತು ಫುಟ್‍ಬಾಲ್ ಪಂದ್ಯಾಟ

 

ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಟೇಬಲ್ ಟೆನಿಸ್ ಮತ್ತು ಫುಟ್‍ಬಾಲ್ ಪಂದ್ಯಾಟವು ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆಯಲ್ಲಿ ದಿನಾಂಕ 22-08-2019ರಂದು ಜರಗಿತು. ಸಂಸ್ಥೆಯ ಸಂಚಾಲಕರಾದ ಕೆ.ಎಸ್. ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಯಸ್. ಚಂದ್ರಶೇಖರ ಭಟ್, ಕಾಲೇಜಿನ ಪ್ರಾಂಶುಪಾಲರಾದ ಡಾ| ಯಂ. ಸಿದ್ದರಾಜು ಹಾಗೂ ಸೈಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜು ಮೊಡಂಕಾಪಿನ ರಾಜ್ಯಶಾಸ್ತ್ರ ಉಪನ್ಯಾಸಕರು ಸುರೇಶ್ ಯನ್. ಉಪಸ್ಥಿತರಿದ್ದರು. ಅಳಿಕೆ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಧನಂಜಯ ಪಿ. ಸ್ವಾಗತಿಸಿ, ಉಪಪ್ರಾಂಶುಪಾಲರಾದ ಡಿ. ರಾಮಚಂದ್ರರಾವ್ ವಂದಿಸಿದರು.

 

ಉಪನ್ಯಾಸಕರಾದ ಅಶೋಕ ಭಟ್ ನಿರೂಪಿಸಿದರು.
ಫುಟ್‍ಬಾಲ್ ಪಂದ್ಯಾಟದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ಪ್ರಥಮ ಸ್ಥಾನ ಹಾಗೂ ಸೈಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜು, ಮೊಡಂಕಾಪು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

 

ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ಪ್ರಥಮ ಸ್ಥಾನ ಮತ್ತು ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು, ಬಂಟ್ವಾಳ ದ್ವಿತೀಯ ಸ್ಥಾನ ಪಡೆದುಕೊಂಡಿತು.

 

ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು, ಬಂಟ್ವಾಳ ಪ್ರಥಮ ಹಾಗೂ ಸೈಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜು, ಮೊಡಂಕಾಪು ದ್ವಿತೀಯ ಬಹುಮಾನವನ್ನು ಗಳಿಸಿಕೊಂಡಿತು