SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಯೋಗ ದಿನಾಚರಣೆಯ ವರದಿ

ಯೋಗ ದಿನಾಚರಣೆಯ ವರದಿ

ದಿನಾಂಕ 21/06/2023ರಂದು ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆಯಲ್ಲಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು. ಯೋಗ ಗುರುಗಳಾದ ಶ್ರೀ ಆನಂದ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವುದರೊಂದಿಗೆ ಮಕ್ಕಳಿಗೆ ಯೋಗದ ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನೀಡಿ ಮಕ್ಕಳೂ ಯೋಗದಲ್ಲಿ ಪಾಲ್ಗೊಳ್ಳುವಂತೆ ಮಾಡಿದರು. ಮುಖ್ಯ ಶಿಕ್ಷಕರಾದ ಈಶ್ವರ ನಾಯ್ಕ ಇವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕರಾದ ರಾಜೇಂದ್ರ ರೈ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಜರಿದ್ದರು.